Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದನು. ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನಾದ ಸೊಲೊಮೋನನು ಬೆನಾಯನಿಗೆ ಆಜ್ಞಾಪಿಸಿದನು. ಬೆನಾಯನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:25
11 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.


ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.


ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.


ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.


ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.


ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು