1 ಅರಸುಗಳು 2:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ದಾಸರು ಗತ್ ಊರಿನಲ್ಲಿರುವದು ಶಿಮ್ಮಿಗೆ ಗೊತ್ತಾದಾಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವದಕ್ಕೋಸ್ಕರ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟುಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದ್ದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |