1 ಅರಸುಗಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |