1 ಅರಸುಗಳು 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |