1 ಅರಸುಗಳು 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
15 ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
15 ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.
15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು.