1 ಅರಸುಗಳು 20:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು. ಅಧ್ಯಾಯವನ್ನು ನೋಡಿ |