Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಇವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:38
6 ತಿಳಿವುಗಳ ಹೋಲಿಕೆ  

ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.


ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.


ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು