1 ಅರಸುಗಳು 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು. ಅಧ್ಯಾಯವನ್ನು ನೋಡಿ |