Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು - ನೀನು ಯಾಕೆ ಊಟಮಾಡುವದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಹಾಬನ ಪತ್ನಿಯಾದ ಈಜೆಬೆಲಳು ಅವನ ಹತ್ತಿರ ಹೋದಳು. ಈಜೆಬೆಲಳು, “ನೀನೇಕೆ ತಳಮಳಗೊಂಡಿರುವೆ? ನೀನು ಏಕೆ ಊಟಮಾಡಲಿಲ್ಲ?” ಎಂದು ಅವನನ್ನು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:5
10 ತಿಳಿವುಗಳ ಹೋಲಿಕೆ  

ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.


ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು