1 ಅರಸುಗಳು 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಇಜ್ರೇಲಿನವನಾದ ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂಬದಾಗಿ ಹೇಳಿದೆನು; ಆದರೆ ಅವನು ಕೊಡುವದಿಲ್ಲ ಅಂದನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ, ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |