Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:8
18 ತಿಳಿವುಗಳ ಹೋಲಿಕೆ  

ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.


ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.


ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.


ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.


ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು