1 ಅರಸುಗಳು 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು. ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು. ಅಧ್ಯಾಯವನ್ನು ನೋಡಿ |