1 ಅರಸುಗಳು 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿ |