Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:13
12 ತಿಳಿವುಗಳ ಹೋಲಿಕೆ  

ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು