1 ಅರಸುಗಳು 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥನಾಗಿ ಬರುವಿ; ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |