1 ಅರಸುಗಳು 22:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿ |