1 ಅರಸುಗಳು 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ;” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಸಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು. ಅಧ್ಯಾಯವನ್ನು ನೋಡಿ |