Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋಷಾಫಾಟನನ್ನು ಈ ಅಧಿಪತಿಗಳು ನೋಡಿದರು. ಆ ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋಷಾಫಾಟನು ಕೂಗಿಕೊಳ್ಳಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:32
10 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.


ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು