Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು! ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:36
11 ತಿಳಿವುಗಳ ಹೋಲಿಕೆ  

ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.


ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.


ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.


ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.


ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು