Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಇವನು ಇಸ್ರಯೇಲರ ಅರಸನೊಡನೆ ಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇವನು ಇಸ್ರಾಯೇಲ್ಯರ ಅರಸನೊಡನೆ ಸಮಾಧಾನದಿಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋಷಾಫಾಟನು ಇಸ್ರೇಲಿನ ರಾಜನೊಂದಿಗೆ ಒಂದು ಶಾಂತಿಒಪ್ಪಂದವನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:44
9 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.


ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?


ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು