1 ಅರಸುಗಳು 22:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು - ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣಮಾಡುವದಕ್ಕೆ ಅಪ್ಪಣೆಯಾಗಲಿ ಎಂದು ಬೇಡಿಕೊಂಡನು; ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ. ಅಧ್ಯಾಯವನ್ನು ನೋಡಿ |