Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿ ನೆಬಾಟನ ಮಗ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜೆಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾಮ ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಈ ಆಡಳಿತಗಾರರೆಲ್ಲ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:52
14 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು