1 ಅರಸುಗಳು 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿ |
ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.