1 ಅರಸುಗಳು 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.