Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:4
18 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.


ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.


ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.


(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.


ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.


ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.


ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.


ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,


ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.


ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು