1 ಅರಸುಗಳು 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನಗೆ ನಂಬಿಗಸ್ತನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾಕೃಪೆಯನ್ನು ತೋರಿಸಿದಿ; ಅವನ ಮೇಲೆ ಬಹಳವಾಗಿ ಕೃಪೆಮಾಡಿ ಈಗಿರುವಂತೆ ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಪೂರ್ತಿಗೊಳಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |