Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:9
36 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.


ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.


ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,


ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.


ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು