Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನರಾಜನು ಸರ್ವ ಇಸ್ರಯೇಲರ ಮೇಲೆ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:1
14 ತಿಳಿವುಗಳ ಹೋಲಿಕೆ  

ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.


ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.


ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.


ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.


ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.


ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು