Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಉರಿಯನ ಮಗ ಗೆಬೆರ್ - ಗಿಲ್ಯಾದ (ಅಮೋರಿಯರ ಅರಸ ಸೀಹೋನ್, ಬಾಷಾನಿನ ಅರಸ ಓಗ್ ಇವರ ಪ್ರದೇಶ) ಪ್ರದೇಶಕ್ಕೆಲ್ಲಾ ಅವನೊಬ್ಬನೇ ಜಿಲ್ಲಾಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದ ಉರೀಯ ಮಗನಾದ ಗೆಬೆರ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:19
7 ತಿಳಿವುಗಳ ಹೋಲಿಕೆ  

ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,


ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು