Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೇಲೆ ಕಂಡ ಪ್ರದೇಶಾಧಿಪತಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕೂತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಅಧಿಪತಿಗಳು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೋಸ್ಕರವೂ, ಅರಸನ ಮೇಜಿಗೆ ಬರುವವರೆಲ್ಲರಿಗೋಸ್ಕರವೂ ಸಿದ್ಧಮಾಡಿದ್ದರು. ಅವರಿಗೆ ಕೊರತೆಯಾದದ್ದು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:27
4 ತಿಳಿವುಗಳ ಹೋಲಿಕೆ  

ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.


ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.


ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು