Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:30
14 ತಿಳಿವುಗಳ ಹೋಲಿಕೆ  

ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.


ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು