Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:31
16 ತಿಳಿವುಗಳ ಹೋಲಿಕೆ  

ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.


ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.


ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.


ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.


ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,


ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು