Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಭೂಪಾಲರಲ್ಲಿಯೂ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:34
6 ತಿಳಿವುಗಳ ಹೋಲಿಕೆ  

ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.


ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು