Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನಾದ ಸೊಲೊಮೋನನು ಅದೋನೀರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೊಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:14
5 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.


ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.


ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು