1 ಅರಸುಗಳು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ಅನುಗ್ರಹದಿಂದ ತಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ಸುತ್ತಲೂ ಯುದ್ಧಗಳನ್ನು ನಡಿಸಬೇಕಾಗಿದ್ದದರಿಂದ ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು. ಅಧ್ಯಾಯವನ್ನು ನೋಡಿ |