1 ಅರಸುಗಳು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸಂಬಂಧಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು. ಅಧ್ಯಾಯವನ್ನು ನೋಡಿ |