Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:29
19 ತಿಳಿವುಗಳ ಹೋಲಿಕೆ  

ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.


ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.


ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.


ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.


ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.


ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.


ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.


ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.


ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು