Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗರ್ಭಗೃಹದ ಬಾಗಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:31
10 ತಿಳಿವುಗಳ ಹೋಲಿಕೆ  

ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.


ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.


ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.


ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.


ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು