1 ಅರಸುಗಳು 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೆಳಗಿನ ಕೊಠಡಿಗಳ ಅಗಲವು ಐದು ಮೊಳ; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲವು ಆರು ಮೊಳ; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದೆಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತೂವರೆ ಅಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕೆಳಗಿರುವ ಕೊಠಡಿಯು 2.2 ಮೀಟರ್ ಅಗಲ, ಎರಡನೆಯದು 2.7 ಮೀಟರ್ ಅಗಲ, ಮೂರನೆಯದು 3.1 ಮೀಟರ್ ಅಗಲ. ಏಕೆಂದರೆ ತೊಲೆಗಳು ಆಲಯದ ಗೋಡೆಗಳಲ್ಲಿ ತಗಲದ ಹಾಗೆ ಆಲಯದ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |