Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:9
8 ತಿಳಿವುಗಳ ಹೋಲಿಕೆ  

ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.


ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.


ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.


ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.


ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು