Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:14
12 ತಿಳಿವುಗಳ ಹೋಲಿಕೆ  

ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.


ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.


ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.


ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.


ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು