Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:23
13 ತಿಳಿವುಗಳ ಹೋಲಿಕೆ  

ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.


ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.


ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.


ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.


ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು