1 ಅರಸುಗಳು 7:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿ |