Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:21
8 ತಿಳಿವುಗಳ ಹೋಲಿಕೆ  

ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು