1 ಅರಸುಗಳು 8:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ, ಅಧ್ಯಾಯವನ್ನು ನೋಡಿ |