Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನೊಂದು ವಾಗ್ದಾನ ಮಾಡಿದ್ದೆ. ನೀನು ಆ ವಾಗ್ದಾನವನ್ನು ನೆರವೇರಿಸಿದೆ. ನಿನ್ನ ಬಾಯಿಂದಲೇ ನೀನು ಆ ವಾಗ್ದಾನವನ್ನು ಮಾಡಿದೆ. ನೀನು ನಿನ್ನ ಮಹಾಶಕ್ತಿಯಿಂದ ಆ ವಾಗ್ದಾನವನ್ನು ಇಂದು ನೆರವೇರುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:24
9 ತಿಳಿವುಗಳ ಹೋಲಿಕೆ  

ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು.


“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.


ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.


ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.


ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು