Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:32
22 ತಿಳಿವುಗಳ ಹೋಲಿಕೆ  

ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.


ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು