Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:34
20 ತಿಳಿವುಗಳ ಹೋಲಿಕೆ  

ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.


ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,


“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,


ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು