Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:43
19 ತಿಳಿವುಗಳ ಹೋಲಿಕೆ  

ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.


ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.


ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು