Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:64 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ‌ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:64
5 ತಿಳಿವುಗಳ ಹೋಲಿಕೆ  

ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.


ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.


ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು